ಮಹಿಳೆ

ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಚೇತರಿಕೆ :ನಾಳೆ ಏಮ್ಸ್​ನಿಂದ ಡಿಸ್ಚಾರ್ಜ್ ಸಾಧ್ಯತೆ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (AIIMS) ಮೂಲಗಳು ತಿಳಿಸಿವೆ. ವೈರಲ್ ಜ್ವರದಿಂದ ಬಳಲುತ್ತಿದ್ದ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಏಮ್ಸ್​​ಗೆ ದಾಖಲಿಸಲಾಗಿತ್ತು. ಸಚಿವರ ಆರೋಗ್ಯ ಚೇತರಿಸಿದೆ. ಹೀಗಾಗಿ ಬುಧವಾರ ವೈದ್ಯರು ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ. 63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್​ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ.

ಸೋಮವಾರ ಬೆಳಿಗ್ಗೆಯಿಂದಲೇ ನಿರ್ಮಲಾ ಸೀತಾರಾಮನ್ ಅಸ್ವಸ್ಥಗೊಂಡಿದ್ದರು. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರನ್ನು ಏಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಏಮ್ಸ್ ಬಹಿರಂಗಪಡಿಸಿರಲಿಲ್ಲ. ಬಳಿಕ, ಹಣಕಾಸು ಸಚಿವರ ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾಗಿಲ್ಲ. ಅವರು ಆರೋಗ್ಯವಾಗಿದ್ದಾರೆ ಎಂದು ಏಮ್ಸ್​ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದರು.

 

andolanait

Share
Published by
andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

17 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

18 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

19 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

20 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

23 hours ago