ಮದ್ಯ ಮಾರದಂತೆ ಬುದ್ದಿ ಹೇಳಿದ್ದಕ್ಕೆ ವ್ಯಕ್ತಿಯನ್ನು ಕೊಚ್ಚಿ ಕೊಂದ ಯುವಕ

ಹಾಸನ: ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯನ್ನು ಯುವಕನೊಬ್ಬ ಕೊಚ್ಚಿ ಕೊಲೆಗೈದ ದುರ್ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ.

ವಡ್ಡರಹಳ್ಳಿಯಲ್ಲಿ ಕೊಡಲಿಯಿಂದ ಕೊಚ್ಚಿ ಸೋಮಣ್ಣ (50) ಹತ್ಯೆ ಮಾಡಲಾಗಿದೆ. ಮದ್ಯ ಮಾರದಂತೆ ಬುದ್ಧಿ ಹೇಳಿದ್ದಕ್ಕೆ ಕುಡಿದು ಬಂದು ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಯಶವಂತ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.